ಹೊಸದುರ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಕುಖ್ಯಾತ ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎ೧ ಆರೋಪಿ ದಾದಪೀರ್ ಹಾಗೂ ಎ೨ ಆರೋಪಿ ನಬೀವುಲ್ಲಾ ಬಂಧಿತ ಆರೋಪಿಗಳು. ಬಂಧಿತರು ಚಿತ್ರದುರ್ಗ ನಗರದ ಕಾವಡಿಗರಹಟ್ಟಿ ನಿವಾಸಿಗಳು ಎಂದು ಗುರುತಿಸಲಾಗಿದೆ. ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಂದ 7 ಲಕ್ಷ ಮೌಲ್ಯದ ಒಟ್ಟು 11 ಬೈಕ್ ಗಳನ್ನ ವಶಕ್ಕೆ ಪಡೆಯಲಾಗಿದೆ. ಹೊಸದುರ್ಗ ಪಿಐ ರಮೇಶ್ ನೇತೃತ್ವದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಹೊಸದುರ್ಗ ಠಾಣೆಯಲ್ಲಿ ಕೇಸ್ ದಾಖಲು