ನಗರದಲ್ಲಿ ಗಣೇಶ ವಿಸರ್ಜನೆಗೆ ಪೊಲೀಸ್ ಬಿಗಿ ಬಂದೋಬಸ್ತ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಅಂತಿಮ ಹಂತದ ಪೊಲೀಸ್ ಭದ್ರತೆಯನ್ನು ಪರಿಶೀಲಿಸಿದರು. ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ನೆರೆ ಜಿಲ್ಲೆಗಳಿಂದ ಬಂದ ಪೊಲೀಸರಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸುವಂತೆ ಸೂಚನೆ ನೀಡಿದರು. ಬೆಳಗಾವಿ ನಗರದಲ್ಲಿ ಸಾರ್ವಜನಿಕ ಗಣೇಶ ವಿಸರ್ಜನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.