ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಿ, ಬೇಗನೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸೂಚನೆ ನೀಡಿದರು. ಸೆಪ್ಟೆಂಬರ್ 11ರ ಸಂಜೆ, ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ದೇಶಿತ ಸ್ಥಳವಾದ ಯರಮರಸ್ ಹೊರವಲಯದ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿಯ ಪರಿವೀಕ್ಷಣೆ ನಡೆಸಿ ಅವರು ಮಾತನಾಡಿದರು. ವಿಮಾನ ನಿಲ್ದಾಣ ಕಾಮಗಾರಿಯಲ್ಲಿ ಪ್ರಸ್ತಾಪಿಸಿರುವ ರನ್‌ವೇ, ಸಿಆರ್‌ಎಫ್ ಕಟ್ಟಡ, ಎಟಿಸಿ ಕಟ್ಟಡ ಮತ್ತು ಮಾಸ್ಟರ್ ಪ್ಲಾನ್‌ದಲ್ಲಿ ತೋರಿಸಿದ ಎಲ್ಲ ಕಾಮಗಾರಿಗಳು ನಿಗದಿಪಡಿಸಿದ ಕಾಲಮಿತಿಯೊಳಗೆ ಪೂರ್ಣವಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.