ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಎರಡು ಮಿನಿ ಗೂಡ್ಸ್ ವಾಹನಗಳನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ. ಆಳಂದ ಪಟ್ಟಣದ ಹೊರವಲಯದ ವೃತ್ತದಲ್ಲಿ ಅಧಿಕಾರಿಗಳು ಎದುರು ಬರುತ್ತಿದ್ದಂತೆ ಎರಡು ವಾಹನದ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಹೀಗಾಗಿ ಅಕ್ರಮ ಅಕ್ಕಿ ಯಾರಿಗೆ ಸೇರಿದ್ದು ಅನ್ನೋದು ಇನ್ನೂ ತಿಳಿದುಬಂದಿಲ್ಲ, ಮಾಹಿತಿ ಪ್ರಕಾರ ಆಳಂದ ಪಟ್ಟಣದ ಪಡಿತರ ಅಂಗಡಿಯೊಂದರಿಂದ ಮಹಾರಾಷ್ಟ್ರದ ಉಮರ್ಗಾಕ್ಕೆ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆಂದು ಗುರುವಾರ 6 ಗಂಟೆಗೆ ಮಾಹಿತಿ ಲಭ್ಯವಾಗಿದೆ..