ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ವೇಳೆ ಮಾತ್ನಾಡಿದ ಅವರು ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಗ್ರಾಮೀಣ ರಸ್ತೆಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ, ಜಂಕ್ಷನ್‍ಗಳಲ್ಲಿ, ತಿರುವುಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮಾರ್ಗಗಳಲ್ಲಿ ಅಗತ್ಯ ಮುಂಜಾಗ್ರತಾ ರಸ್ತೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಸುರಕ್ಷಾ ಕ್ರಮಗಳಿಂದ ರಸ್ತೆ ಅಪಘಾತಗಳನ್ನು ತಡೆಯಲು ಸಾಧ್ಯವಿದೆ ಎಂದರು.