ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಭತ್ತ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ರೈತರಿಗೆ ತುಂಬಾ ನಷ್ಟ ಉಂಟಾಗಿದ್ದು,ರೈತರ ಜಮೀನುಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ಕೂಡಲೇ ವರದಿ ಸಲ್ಲಿಸಬೇಕು ಮತ್ತು ರೈತರಿಗೆ ಸಕಾಲದಲ್ಲಿ ಸರಕಾರ ಪರಿಹಾರ ನೀಡುವಂತೆ ಯಾದಗಿರಿ ತಾಲೂಕಿನ ಬಾಚವಾರ ಗ್ರಾಮದಲ್ಲಿ ಅಖಂಡ ಕರ್ನಾಟಕ ರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷ ಮಂಜುನಾಥ ಬಡಿಗೇರ್ ಒತ್ತಾಯಿಸಿದ್ದಾರೆ.