ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಮ್ಮಲಗಿ ಗ್ರಾಮದಲ್ಲಿ ಶ್ರೀ ಗಜಾನನ ಮಹಾಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಕಬಡ್ಡಿ ಕ್ರೀಡಾಕೂಟವನ್ನು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಗುರುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಯುವಕರು ದುಶ್ಚಟದಿಂದ ದೂರವಿದ್ದು ಕ್ರೀಡೆಗಳಲ್ಲಿ ಭಾಗಿಯಾಗಿ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಗಜಾನನ ಮಹಾಮಂಡಳಿಯ ಪದಾಧಿಕಾರಿಗಳು ಜನಪ್ರತಿನಿಧಿಗಳು ಭಾಗಿಯಾಗಿದ್ದರು.