ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಿಸುವ ಜವಾಬ್ದಾರಿ ರಾಷ್ಟ್ರೀಯ ಟ್ರಸ್ಟಗಳ ಮೇಲಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ಶುಕ್ರವಾರ ಸಂಜೆ 5 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ರಾಷ್ಟ್ರೀಯ ಸ್ಮಾರಕ ಟ್ರಸ್ಟಗಳಿಗೆ ಸರಕಾರದಿಂದ ನೂತನವಾಗಿ ನೇಮಕವಾಗಿರುವ ಅಧ್ಯಕ್ಷ, ಸದಸ್ಯರಿಗೆ ಜಿಲ್ಲಾಡಳಿತದ ಪರವಾಗಿ ಸತ್ಕರಿಸಿ, ಮಾತನಾಡಿದರು.