ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣಪತಿ ಗಲಾಟೆ ಪ್ರಕರಣದ ಕುರಿತು ಚಿಕ್ಕಮಗಳೂರಿನಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಮದ್ದೂರು ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 21 ಜನರನ್ನ ಅರೆಸ್ಟ್ ಮಾಡಿದ್ದೇವೆ. ಇದರಲ್ಲಿ ಹಿಂದೂಗಳ ಮೇಲೆ ಯಾವುದೇ ಕ್ರಮ ಆಗಿಲ್ಲ, ಯಾರನ್ನು ಅರೆಸ್ಟ್ ಮಾಡಿಲ್ಲ, ಎಫ್‌ಐಆರ್ ಆಗಿಲ್ಲ. ಇದು ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದನೇ ಆಗಿರುವ ಘಟನೆ ಯಾಗಿರುವುದರಿಂದ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿಯಿಂದ ಇಂದು ಸಾಮೂಹಿಕ ಗಣಪತಿ ವಿಸರ್ಜನೆ ಹಮ್ಮಿಕೊಂಡಿದ್ದು ಹೊರಗಿನಿಂದ ಪರ್ಚೇಸ್ ಮಾಡಿ ತಂದು ಗಣಪತಿ ನಂಬರ್ ಹೆಚ್ಚಿಸಲು ನೋಡುತ್ತಿದ್ದಾರೆ ಇದು ಸಂಪೂರ್ಣ ರಾಜಕೀಯ ಪ್ರೇರಿತ ಶೋಭಾ ಯಾತ್ರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.