ರೈತಸಂಘದ ಹಂಗಾಮಿ ಪದಾಧಿಕಾರಿಗಳ ಆಯ್ಕ ಜಿಲ್ಲಾ ಸಮಿತಿ ಪದಾಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತಸಂಘ (ಪುಟ್ಟಣ್ಣಯ್ಯ ಬಣ)ದ ಹಂಗಾಮಿ ಪದಾಧಿಕಾರಿಗಳ ಆಯ್ಕೆಯನ್ನು ಕೋಲಾರದ ಪ್ರವಾಸಿ ಮಂದಿರದಲ್ಲಿ ನಡೆಯಿತು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ ಅವರು, ಸಭೆಯಲ್ಲಿ ರೈತಸಂಘದ ಸದಸ್ಯರು ಪ್ರಸ್ತುತ ಸಮಿತಿಯ ನಿರ್ವಹಣಾ ಶೈಲಿಯ ಕುರಿತು ಅಸಮಾಧಾನ ಹೊರಹಾಕಿ, ಸಂಘದ ಈ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಹಂಗಾಮಿ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.