ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ ಬಾವಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ಅಂತರ್ಜಲ ಅಭಿವೃದ್ದಿ ಮತ್ತು ಅತಿ ಬಳಕೆ ನಿಯಂತ್ರಣ ಅಧಿನಿಯಮದಡಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬಿದ್ದು ಸಾವಿಗೀಡಾಗುವ ಅವಘಡಗಳನ್ನು ತಪ್ಪಿಸಲು ಮುಂಜಾಗ್ರತೆವಹಿಸಿ ಮಣ್ಣು ಮತ್ತು ಕಲ್ಲುಗಳಿಂದ ಸಂಪೂರ್ಣವಾಗಿ ಮುಚ್ಚಿ ಗಿಡನೆಟ್ಟು ಸುರಕ್ಷಿತವಾಗಿಡಬೇಕು ಎಂದರು.