ಬೆಂಗಳೂರಿನ ಕಾಟನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪುಣ್ಯ ಹಿನ್ನೆಲೆಯಲ್ಲಿ ಇಂದು ನೂತನ ಡಯಾಲಿಸಿಸ್ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡುವ ಮೂಲಕ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಆರೋಗ್ಯ ಸೇವೆ ಒದಗಿಸಲಾಯಿತು. ಗಾಂಧೀನಗರ ಕ್ಷೇತ್ರದ ಕಾಟನ್ ಪೇಟೆ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಸಚಿವರು ಆಗಿರುವ ದಿನೇಶ್ ಗುಂಡೂರಾವ್