ಅಪ್ರಾಪ್ತ ವಯಸ್ಸಿನ ಬಾಲಕನನ್ನು ಅಪಹರಿಸಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿ ನಡೆದಿದೆ. ಇರ್ಫಾನ್ ಶಬ್ಬೀರ್ ಭಂಡಾರಿ ಎಂಬಾತನೇ ದೌರ್ಜನ್ಯ ಎಸಗಿದ ಆರೋಪಿ. ಬೊಲೆರೋ ವಾಹನದಲ್ಲಿ ಅಪ್ರಾಪ್ತ ಬಾಲಕನನ್ನು ಅಪಹರಿಸಿಕೊಂಡು ಹೋಗಿ ಬೆಣಕನಹಳ್ಳಿ ಬ್ರಿಡ್ಜ್ ಹತ್ತಿರ ವಾಹನದಲ್ಲಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಎಫ್ಐಆರ್ ನಲ್ಲಿ ತಿಳಿಸಿದೆ..ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.