ಒಳ ಮೀಸಲಾತಿ ವರ್ಗೀಕರಣ ಸೂತ್ರದಲ್ಲಿ ದೋಷವಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಕರ್ನಾಟಕ ಮಾದಿಗ ಮತ್ತು ಉಪ ಜಾತಿಗಳ ಒಳ ಮೀಸಲಾತಿ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಪಿ. ಶಿವಪ್ಪ ಒತ್ತಾಯಿಸಿದರು. ಬುಧವಾರ ಸಂಜೆ 5:30ಕ್ಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಲು ಹೊರಟಿದೆ. ಸೆ. 4ರಂದು ಇದಕ್ಕಾಗಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ದೋಷಪೂರಿತವಾಗಿರುವ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಿ ಎಲ್ಲ 101 ಪರಿಶಿಷ್ಟ ಜಾತಿಗಳಿಗೆ ನ್ಯಾಯ ಸಿಗಬೇಕು. 6, 6, 5ರ ವರ್ಗೀಕರಣ ಸೂತ್ರ ಸರಿ ಇಲ್ಲ. ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದರು