ಯಾದಗಿರಿ ತಾಲೂಕಿನ ಬಾಚವಾರ ಗ್ರಾಮದ ಬಳಿ ಬುಧವಾರ ಮಧ್ಯಾನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಯಾರು ಎನ್ನುವುದು ತಿಳಿದುಬಂದಿಲ್ಲ, ವ್ಯಕ್ತಿಯ ಗುರುತು ಯಾರಿಗಾದರೂ ಪತ್ತೆಯಾದಲ್ಲಿ ಯಾದಗಿರಿ ಗ್ರಾಮೀಣ ಠಾಣೆಯ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ವ್ಯಕ್ತಿಯ ಸಾವಿಗೆ ಏನು ಕಾರಣ ಎನ್ನುವುದು ಕೂಡ ಪೊಲೀಸರ ತನಿಖೆಯಿಂದ ತಿಳಿದು ಬರಲಿದೆ.