ವಿಜಯಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಅವಾಂತರಕ್ಕೆ ಈರುಳ್ಳಿ ಬೆಳೆ ಹಾನಿಯಾದ ಪ್ರದೇಶಕ್ಕೆ ಗುರುವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ತೋಟಗಾರಿಕೆ ಇಲಾಖೆ ನಿರ್ದೇಶಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯ ಅವಾಂತರಕ್ಕೆ ಗ್ರಾಮದ ನೂರಾರು ಎಕರೆ ಈರುಳ್ಳಿ ಬೆಳೆಯ ಸಂಪೂರ್ಣವಾಗಿ ಹಾಳಾಗದ ಹಿನ್ನೆಲೆ, ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರುಗಳು ರೈತರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.