ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿನ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರರವರಿಗೆ ಕರ್ನಾಟಕ ರಾಜ್ಯ ವೃತ್ತಿ ನೀಡುತ್ತಾ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮನವಿ ಪತ್ರವನ್ನು ಗುರುವಾರ ಸಲ್ಲಿಸಲಾಯಿತು. ಮಹಿಳಾ ಪತ್ರಕರ್ತೆ ರಾಧಾ ಹಿರೇಗೌಡರ್ ಅವರ ವಿರುದ್ಧ ಅಪಮಾನ ಮಾಡುವ ರೀತಿಯಲ್ಲಿ ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರು ವರ್ತನೆ ಮಾಡಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಸರ್ಕಾರಕ್ಕೆ ಜಿಲ್ಲಾಧಿಕಾರಿ ಅವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.