ಜಿಲ್ಲೆಯ ಪಶ್ಚಿಮ ಘಟ್ಟ ಶ್ರೇಣಿಯ ಗಿರಿ ಪ್ರದೇಶದಲ್ಲಿ ವ್ಯಾಪಕ ಮಳೆ ಹಾಗೂ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸೆ.14 ರವರೆಗೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗ ಐ.ಡಿ.ಪೀಠ, ಮತ್ತು ಮುಳ್ಳಯ್ಯನಗಿರಿ ಪ್ರದೇಶ ಪ್ರಮುಖ ಪ್ರವಾಸಿ ಆಕರ್ಷಣೆ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸುರಕ್ಷತಾ ಹಿತದೃಷ್ಟಿಯಿಂದ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರವಾಸಿಗರು ಸೆ.14ರವರೆಗೆ ತಮ್ಮ ಪ್ರವಾಸ ಮುಂದೂಡುವಂತೆ ಮನವಿ ಮಾಡಿದೆ.