ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ ರಾಜ್ಯ ಸರ್ಕಾರವು 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂಗಳನ್ನು ಮೀಸಲಿಟ್ಟಿದ್ದು, ದುರ್ಬಲ ವರ್ಗದ ಮಕ್ಕಳಿಗೆ “ಕಾಕ್ಲಿಯರ್ ಇಂಪ್ಲಾಂಟ್” ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ“ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.