ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಸಂಚು ನಡೆಯುತ್ತಿದೆ, ಇದಕ್ಕೆ ಸಮಾಜಘಾತುಕ ಶಕ್ತಿಗಳು ಕೈ ಹಾಕಿವೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಒತ್ತಾಯಿಸಿದರು. ಹಾಸನದಿಂದ ಧರ್ಮಸ್ಥಳಕ್ಕೆ ಸತ್ಯ ಯಾತ್ರೆ ಆರಂಭಿಸಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದವರು ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳದ ಆವರಣದಲ್ಲಿ ಅಪಪ್ರಚಾರಗಳು, ಅನುಮಾನ ಎಬ್ಬಿಸುವಂತಹ ಸಂಘಟಿತ ಷಡ್ಯಂತ್ರಗಳು ನಡೆಯುತ್ತಿವೆ ಎಂದು ಆರೋಪಿಸಿದರು.ಮಂಜುನಾಥಸ್ವಾಮಿ ವಿಚಾರದಲ್ಲಿ ರಾಜಕೀಯ ಬೆರೆಸುವ ಪ್ರಶ್ನೆಯೇ ಇಲ್ಲ. ಇದು ಪಕ್ಷಾತೀತ ಯಾತ್ರೆ. ಭಕ್ತಾಧಿಗಳು ಸ್ವಇಚ್ಛೆಯಿಂದ ಪಾಲ್ಗೊಂಡಿದ್ದಾರೆಎಂದು ಅವರು ಹೇಳಿದರು.