ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ, ಈ ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್‌ಗಳಲ್ಲಿಯೂ ಒಂದೊಂದು ಗುಂಪು ಹೆಚ್ಚಾಗಿದ್ದು, ಜನ ಓಡಾಡುವಾಗ ಮತ್ತು ವಾಹನ ಚಲಾಯಿಸುವ ವೇಳೆ ಹಿಂಬಾಲಿಸಿಕೊಂಡು ಬೊಗಳುತ್ತವೆ. ವಿದ್ಯಾರ್ಥಿಗಳು ಶಾಲಾ–ಕಾಲೇಜಿಗೆ, ವಯೋವೃದ್ಧರು ವಾಯು ವಿಹಾರಕ್ಕೆ ತೆರಳುವ ವೇಳೆ ನಾಯಿಗಳು ದಾಳಿ ನಡೆಸುತ್ತವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಮೊಹಮ್ಮದ್ ಆಸೀಫ್ ಮಾತನಾಡಿ, ನಾಯಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿದ್ದಾರೆ.