ಸುತ್ತೂರು ಮಹಾಸಂಸ್ಥಾನದ ಪೀಠಾಧಿಪತಿಗಳಾಗಿದ್ದ ಡಾ. ಶ್ರೀ ಶಿವರಾತ್ರಿರಾಜೇಂದ್ರ ಮಹಾಸ್ವಾಮಿಗಳವರಿಗೆ ಭಾರತ ಸರ್ಕಾರ ಈ ಬಾರಿಯ “ಭಾರತ ರತ್ನ" ಪುರಸ್ಕಾರ ನೀಡಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ನಗರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮುಖಾಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು. ಬಳಿಕ ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ, ಅನ್ನದಾಸೋಹ ಮತ್ತು ಆರೋಗ್ಯ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಳೆದ 70 ವರ್ಷಗಳಿಂದ ನಿರಂತರವಾಗಿ ಸೇವೆ ಪರಿಗಣಿಸಬೇಕೆಂದರು.