ಪೋಷಣ್ ಅಭಿಯಾನದ ಮುಖ್ಯ ಗುರಿ ಅಪೌಷ್ಠಿಕತೆಯನ್ನು ಹೋಗಲಾಡಿಸುವುದು ಹಾಗೂ ಪೌಷ್ಠಿಕತೆಯನ್ನು ಹೆಚ್ಚಿಸುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರವೀಣ್.ಪಿ.ಬಾಗೇವಾಡಿ ಕೋಲಾರ : ಪೋಷಣ್ ಅಭಿಯಾನದ ಮುಖ್ಯ ಗುರಿ ಅಪೌಷ್ಠಿಕತೆಯನ್ನು ಹೋಗಲಾಡಿಸುವುದು ಹಾಗೂ ಪೌಷ್ಠಿಕತೆಯನ್ನು ಹೆಚ್ಚಿಸುವುದು ಪ್ರಮುಖ ಅಂಶವಾಗಿದ್ದು, ಜೊತೆಗೆ ಸ್ಟಂಟಿಂಗ್ ಮತ್ತು ವೇಸ್ಟಿಂಗ್ ಅನ್ನು ಎನ್.ಎಫ್.ಎಚ್.ಎಸ್. ಸರ್ವೇ ಪ್ರಕಾರ ಕಡಿಮೆ ಗೊಳಿಸುವಂತೆ ಹಾಗೂ ಕೋಲಾರವನ್ನು ಅಪೌಷ್ಠಿಕ ಮುಕ್ತ ಕೋಲಾರವನ್ನಾಗಿ ಮಾಡಲು ಪಣತೊಡಗಬೇಕೆಂದು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರವೀಣ್.ಪಿ.ಬಾಗೇವಾಡಿ ಅವರು ತಿಳಿಸಿದರು.