ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆಯಿಂದ ಪ್ರತಿಷ್ಠಾಪನೆ ಮಾಡಿರುವ ಗಣೇಶನಿಗೆ ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿ ಪ್ರತಿ ವರ್ಷ ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.