ಕುಡಿಯುವ ನೀರು,ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹಂತಹಂತವಾಗಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಪಾಲಿಕೆಯಷ್ಟೇ ಸ್ಥಳೀಯ ಸಂಸ್ಥೆಗಳು ಕೆಲಸ ಮಾಡುವ ಜತೆಗೆ,ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸಲಹೆ ನೀಡಿದರು.ಹೂಟಗಳ್ಳಿ ಎಚ್.ಕೆ.ಫಂಕ್ಷನ್‌ಹಾಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ಹೂಟಗಳ್ಳಿ ನಗರಸಭೆ ವತಿಯಿಂದ ಆಯೋಜಿಸಿದ್ದ ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು, ಬೀದಿನಾಯಿಗಳ ಹಾವಳಿ, ಒಳಚರಂಡಿ ನಿರ್ವಹಣೆ ಮತ್ತು ಬೀದಿ ದೀಪಗಳ ನಿರ್ವಹಣೆ ಕುರಿತಂತೆ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.