ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ರಸ್ತೆ ಬದಿಗಳಲ್ಲಿ ಅಕ್ರಮವಾಗಿ ಹಾಕಲಾಗಿರುವ ಅಂಗಡಿಗಳ ಶೆಡ್ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಶನಿವಾರ ಸಾಯಂಕಾಲದ ವರೆಗೂ ನಡೆದ ಕಾರ್ಯಾಚರಣೆಯಲ್ಲಿ ಅನೇಕ ಶಡ್ ಗಳನ್ನು ತೆರವುಗೊಳಿಸಲಾಯಿತು. ತಾಲೂಕ ಆಡಳಿತ ಪುರಸಭೆ ಮತ್ತು ಹೆದ್ದಾರಿ ಪ್ರಾಧಿಕಾರ ಜಂಟಿಯಾಗಿ ಕಾರ್ಯಚರಣೆ ನಡೆಸಿ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದ್ದ ಅಡೆತಡೆ ನಿವಾರಣೆಗೊಳಿಸಲು ಕಾರ್ಯಚರಣೆ ನಡೆಸಿದ್ದು ಎರಡು ದಿನಗಳ ಹಿಂದೆಯೇ ವ್ಯಾಪಾರಸ್ಥರಿಗೆ ನೋಟಿಸ್ ನೀಡಲಾಗಿತ್ತು.