ಗಡಿಗಿ ಚನ್ನಪ್ಪ ವೃತ್ತದಿಂದ ಈಡಿಗ ಹಾಸ್ಟೇಲ್'ವರೆಗಿನ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಶುಕ್ರವಾರ ಬೆಳಿಗ್ಗೆ 11:30ಕ್ಕೆ ಆರಂಭಗೊಂಡಿತು. ಶಾಸಕ ನಾರಾ ಭರತ್ ರೆಡ್ಡಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದು, ಅಗತ್ಯ ಸೂಚನೆ ನೀಡಿದರು. ಗಾಂಧಿ ಭವನದ ಎದುರಿಗೆ ಉದ್ಧೇಶಿತ ಹೂ-ಹಣ್ಣು ಬೀದಿ ಬದಿ ವ್ಯಾಪಾರಿಗಳ ಮಾರುಕಟ್ಟೆ ನಿರ್ಮಾಣ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದ ಶಾಸಕ ನಾರಾ ಭರತ್ ರೆಡ್ಡಿ ಕಾಮಗಾರಿ ವಿಳಂಬ ಆಗದಂತೆ ಕೆಲಸ ಮಾಡಬೇಕೆಂದು ಸೂಚಿಸಿದರು. ಈ ಸಂದರ್ಭ ಪಾಲಿಕೆಯ ಮಾಜಿ ಮೇಯರ್ ಎಂ.ರಾಜೇಶ್ವರಿ, ಸದಸ್ಯರಾದ ಪ್ರಭಂಜನಕುಮಾರ್, ಪಿ.ಗಾದೆಪ್ಪ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ನಾಗಲಕೆರೆ ಗೋವಿಂದ, ಸ