ಪ್ರಸ್ತುತ ಮುಂಗಾರಿನಲ್ಲಿ ಸುರಿದ ಅತಿವೃಷ್ಟಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಸರ್ಕಾರ ಈ ಕೂಡಲೇ 5000 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು ಮಾಜಿ ಸಚಿವ ಬಿಸಿ ಪಾಟೀಲ ಸರ್ಕಾರಕ್ಕೆ ಒತ್ತಾಯ ಮಾಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಹೆಚ್ಚಿನ ಪರಿಹಾರ ನೀಡಿದ್ದೆವು. ಈಗಿನ ಸರ್ಕಾರ ರೈತರ ವಿರೋಧಿಯಾಗಿದೆ ಎಂದು ಆರೋಪಿಸಿದರು.