ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಕೈಗೊಳ್ಳುತ್ತಿದ್ದು, ಜಿಲ್ಲೆಯಲ್ಲೂ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀ ಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆ ಮತ್ತು ಇತರೆ ಸಾಮಾಜಿಕ ಅಂಶ ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಒದಗಿಸುವ ಉದ್ದೇಶದಿಂದ ದತ್ತಾಂಶ ಸಂಗ್ರಹ ಸಮೀಕ್ಷೆ