ತಾಲ್ಲೂಕಿನ ಪರಶುರಾಂಪುರದಲ್ಲಿ ನಡೆಯುವ ರಸ್ತೆ ಅಗಲೀಕರಣ ಕಾಮಗಾರಿ ಸ್ಥಳಕ್ಕೆ ಶನಿವಾರ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ವೀಕ್ಷಣೆ ಮಾಡಿದರು. ನಂತರ ರಸ್ತೆ ಅಗಲೀಕರಣ ಕಾಮಗಾರಿಗೆ ಅಂಗಡಿ, ಮನೆಗಳ ಮಾಲೀಕರು ಸಹಕರಿಸುವಂತೆ ಮನವಿ ಮಾಡಿದ ಅವರು ರಸ್ತೆ ಅಗಲೀಕರಣ ಕಾಮಗಾರಿಯನ್ನು ಗುಣಮಟ್ಟದಿಂದ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಗ್ರಾಪಂ ಅಧ್ಯಕ್ಷ ರುದ್ರೇಶ್ ಸೇರಿದಂತೆ ಮುಂತಾದವರು ಇದ್ದರು.