ಕಾಂಗ್ರೆಸ್ ಹಾಗೂ ಆರ್‌ಜೆಡಿ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯ ಬಗ್ಗೆ ಕಾರ್ಯಕರ್ತರು ಅಶ್ಲೀಲ ಪದಗಳ ಘೋಷಣೆ ಕೂಗಿದ್ದರು. ಇತ್ತ ಉತ್ತರ ಕನ್ನಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಮಹಿಳಾ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಹೇಳಿಕೆ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗ್ತಿದೆ. ಇವರೆಡೂ ಘಟನೆಗಳನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೀತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಉ.ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ನೆರೆ ಬಂದರೆ ಹೆರಿಗೆ ಮಾಡ