ನಗರದ ಪತ್ರಿಕಾಭವನದಲ್ಲಿ ಗುರುವಾರ ಸಂಜೆ 4ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಅವರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನಿರ್ಮಿಸಿದ ಹಳೆ ವಿದ್ಯಾರ್ಥಿಗಳ ಭವನದ ಉದ್ಘಾಟನಾ ಸಮಾರಂಭ ಮತ್ತು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನವನ್ನು ಸೆಪ್ಟೆಂಬರ್ 15ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ಎಸ್. ವೈದ್ಯ ಭವನವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.