ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಚಾಮುಂಡಿ ಬೆಟ್ಟದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ ಪದೇ ಪದೇ ಚಿರತೆಯು ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ಚಾಮುಂಡಿ ಬೆಟ್ಟದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ ಕಳೆದ ವಾರವಷ್ಟೇ ಇದೇ ರೀತಿ ಸಾರ್ವಜನಿಕರ ಕಣ್ಣಿಗೆ ಬಿದ್ದಿರುವ ಚಿರತೆಯು ಈಗ ಮತ್ತದೇ ಜಾಗದಲ್ಲಿ ಬೇಲಿಯ ಮಧ್ಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರೋಬ್ಬರು ತಮ್ಮ ಕಾರಿನಲ್ಲೇ ಕುಳಿತು ಚಿರತೆಯ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ ಮೊಬೈಲ್ ನಲ್ಲಿ ಸೆರೆ ಹಿಡಿಯುವ ಸಂದರ್ಭದಲ್ಲಿ ಬೇಲಿ ಒಳಗಿದ್ದ ಚಿರತೆ ರಾಜಾರೋಷವಾಗಿ ಹೊರಬಂದು ಕ್ಯಾಮರಾಗೆ ಪೋಸ್ ಕೊಟ್ಟಿದೆ ಈ ದೃಶ್ಯವೂ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.