ನಾಗಠಾಣ ಮೀಸಲು ಮತಕ್ಷೇತ್ರದಿಂದ ಸಂಸದ ರಮೇಶ್ ಜಿಗಜಿಣಗಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ ಅವರ ಕೊಡುಗೆ ನಾಗಠಾಣ ಮತಕ್ಷೇತ್ರಕ್ಕೆ ಏನಿದೆ ಎಂಬುದನ್ನು ಮೊದಲು ಬಿಜೆಪಿಯವರು ಬಹಿರಂಗಪಡಿಸಬೇಕು. ಶಾಸಕ ವಿಠ್ಠಲ್ ಕಟಕದೊಂಡ್ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಅವರ ಬಗ್ಗೆ ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತನಾಡುವ ನೈತಿಕತೆ ಇಲ್ಲ ಎಂದು ವಿಜಯಪುರದಲ್ಲಿ ಭಾನುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿಕೆ ನೀಡಿದರು.