ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರವು ವರ್ಷದ ಕೊನೆಯ ಖಗ್ರಾಸ ಚಂದ್ರ ಗ್ರಹಣವನ್ನು ದೂರದರ್ಶಕದ ಮೂಲಕ ವೀಕ್ಷಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿತ್ತು. ಭಾನುವಾರ ರಾತ್ರಿ ೧೧ ಗಂಟೆ ೦೧ ನಿಮಿಷಕ್ಕೆ ಪೂರ್ಣ ಚಂದ್ರ ಗ್ರಹಣ ಪ್ರಾರಂಭವಾದ ಹಿನ್ನೆಲೆಯಲ್ಲಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಧಾರವಾಡ ಪ್ರಾದೇಶಿಕ ವಿಜ್ಞಾನ ಸಂಸ್ಥೆಗೆ ಆಗಮಿಸಿ ಕುತೂಹಲದಿಂದ ಚಂದ್ರ ಗ್ರಹಣವನ್ನು ವೀಕ್ಷಸಿದರು.