ಗುತ್ತಿಗೆದಾರರಿಗೆ ಅನ್ಯಾಯ ಗುತ್ತಿಗೆ ಪರವಾನಗಿ ಸರ್ಕಾರಕ್ಕೆ ವಾಪಸು ಕೊಡುವ ಮೂಲಕ ಪ್ರತಿಭಟನೆ, ಕೋಲಾರ : ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಪ್ಯಾಕೇಜ್ ಕಾಮಗಾರಿಗಳಿಂದ ಆಗುತ್ತಿರುವ ಅನ್ಯಾಯ ಹಾಗೂ ಗುತ್ತಿಗೆ ಮೀಸಲಾತಿ ಆದೇಶವನ್ನು ಹರಿದುಹಾಕಿ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದಿಂದ ಬುಧವಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಬೈಕ್ ರ್ಯಾಲಿ ಪ್ರಾರಂಭವಾಗಿ ಕ್ಲಾಕ್ ಟವಕ್, ಹೊಸ ಬಸ್ ನಿಲ್ದಾಣ ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರದ ಕ್ರಮವನ್ನು ಖಂಡಿಸಿ ಘೋಷಣೆ ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ