ಚಿತ್ರದುರ್ಗದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಚಿತ್ರದುರ್ಗದ ಹಿಂದೂ ಮಹಾ ಗಣಪತಿಯ ವಿಸರ್ಜನೆ ಬೃಹತ್ ಶೋಭಾಯಾತ್ರೆಗೆ ಕ್ಷಣ ಗಣನೆ ಆರಂಬವಾಗಿದ್ದು ಶನಿವಾರ ಬೆಳಗ್ಗೆ 11 ಗಂಟೆಗೆ ಹಿಂದೂ ಮಹಾ ಗಣಪತಿಯ ಬೃಹತ್ ಶೋಭಾಯಾತ್ರೆ ಆರಂಬವಾಗಲಿದ್ದು ಈ ಹಿನ್ನೆಲೆ ಶುಕ್ರವಾರ ಸಂಜೆ 4.30 ಕ್ಕೆ ನಗರದ ಸೈನ್ಸ್ ಕಾಲೇಜು ಆಟದ ಮೈದಾನ ಬಳಿ ಪಥ ಸಂಚಲನಕ್ಕೆ ಚಾಲನೆ ನೀಡಲಾಯಿತು