ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ 17 ಗಂಟೆಗಳ ಬಳಿಕ ನೆರವೇರಿದೆ. ಇನ್ನು ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನೆರವೇರಿತು. ಇನ್ನು ಸತತ 17 ಗಂಟೆಗಳ ಬಳಿಕ ಭಾನುವಾರ ಬೆಳಗಿನ ಜಾವ ಶಿವಮೊಗ್ಗ ಕೋಟೆ ಭೀಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ತುಂಗಾ ನದಿಯಲ್ಲಿ ಗಣಪತಿ ವಿಸರ್ಜನೆಯನ್ನು ನೆರವೇರಿಸಲಾಗಿದೆ. ಒಟ್ಟಾರೆ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಕಾರ್ಯಕ್ರಮ ಹಬ್ಬದ ರೀತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಿಂದೂ ಸಂಘಟನೆಯ ಮುಖಂಡರುಗಳು ಉಪಸ್ಥಿತರಿದ್ದರು.