ಹಾಸನ :ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ತ ನಗರದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಇದೇ ವೇಳೆ ಮಾತನಾಡಿದ ಎಸ್ ಪಿ ಮಹಮ್ಮದ್ ಸುಜಿತಾ, ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಗಲಾಟೆ ಗದ್ದಲಕ್ಕೆ ಅವಕಾಶ ನೀಡಬಾರದು. ಸಂಜೆ ಮತ್ತು ರಾತ್ರಿ ನಿಗದಿಪಡಿಸಿದ ಸಮಯದಲ್ಲಿಸಾರ್ವಜನಿಕ ಕಾರ್ಯಕ್ರಮಗಳನ್ನು ಮುಗಿಸಬೇಕು. ವೃದ್ಧರು, ರೋಗಿಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಬ್ಬರದ ಧ್ವನಿವರ್ಧಕ ಬಳಸದಂತೆ ಸೂಚನೆ ನೀಡಿದರು.