ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮುಲ್ಲಾಮಾರಿ ಜಲಾಶಯದಲ್ಲಿ ಹದಿನೈದಕ್ಕೂ ಹೆಚ್ಚು ಯುವಕರು ಜೀವ ಪಣಕ್ಕಿಟ್ಟು ಮೀನುಗಾರಿಕೆಯಲ್ಲಿ ತೊಡಗಿದ್ದಾರೆ. ಡ್ಯಾಂ ಗೇಟ್‌ಗಳಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಆಗುತ್ತಿದ್ದರೂ, ರಭಸವಾಗಿ ಹರಿಯುವ ನೀರಿನಲ್ಲಿ ಯುವಕರು ದುಸ್ಸಾಹಸದಿಂದ ಮೀನು ಹಿಡಿಯಲು ಮುಂದಾಗಿದ್ದಾರೆ. ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವುದರಿಂದ ಜೀವಾಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.