ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ವಕೀಲರ ಸಂಘದ ಸದಸ್ಯರಾಗಿರುವ ಎಸ್.ಕೆ.ರವಿಚಂದ್ರ ಅವರು ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಅಗಸನವಳ್ಳಿ ಗ್ರಾಮದಲ್ಲಿ ಸರ್ಕಾರದಿಂದ ಮಂಜೂರಾಗಿರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಿದ್ದಾರೆ. ಸದರಿ ಮನೆ ಕೆಲಸ ಸ್ವಲ್ಪ ಬಾಕಿ ಇರುವ ಹಂತದಲ್ಲೇಅ ಸೊರಬದ ತಹಶೀಲ್ದಾರ್ ರವರು ವಕೀಲರಿಗೆ ಯಾವುದೇ ಮಾಹಿತಿ ನೀಡದೆ ತೆರವುಗೊಳಿಸಿದ್ದು, ಇದು ಕಾನೂನು ಬಾಹಿರ ಮತ್ತು ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಶಿವಮೊಗ್ಗ ನಗರದಲ್ಲಿ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮನವಿಯನ್ನು ಸಲ್ಲಿಸಿದರು. ವಕೀಲರ ಸಂಘದ ಅಧ್ಯಕ್ಷ ನಾಗರಾಜ್.ಎನ್.ಕೆ,ಕಾರ್ಯದರ್ಶಿ ವಿನಯ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.