ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆಯನ್ನು ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿಯ ನಗರ ಮಂಡಲ ಘಟಕದಿಂದ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಮಾರಮ್ಮ ಗುಡಿ ಜಮಾಯಿಸಿದ ಕಾರ್ಯಕರ್ತರು. ಅಲ್ಲಿಂದ ಪಂಜಿನ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ಸರ್ಕಾರಕ್ಕೆ ಹಾಗೂ ಗೃಹ ಸಚಿವರಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.