ವಿಜಯಪುರ ತಾಲೂಕಿನ ಕವಲಗಾ ಗ್ರಾಮದ ಸಂಗನಬಸವ ಅಂತರಾಷ್ಟ್ರೀಯ ಶಾಲೆಯಲ್ಲಿ ಜರುಗಿದ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶುಕ್ರವಾರ ಸಾಯಂಕಾಲ 6ಗಂಟೆ ಸುಮಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಯುವಕರು ಕ್ರೀಡೆಗಳತ್ತ ಹೆಚ್ಚಿನ ಗಮನ ಹರಿಸಬೇಕು, ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳು ನಿರ್ಮಾಣವಾಗಬೇಕು ಎಂದರು...