ಚಾಮರಾಜನಗರ ಜಿಲ್ಲೆಯ 69 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆಯಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆಂಗ್ಲ ಮಾಧ್ಯಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. 69 ಕಡೆಯಲ್ಲಿ ಪ್ರಾರಂಭವಾಗಿದ್ದು, ಒಂದು ತರಗತಿಗೆ 30 ಮಕ್ಕಳಿಗೆ ಅವಕಾಶವಿತ್ತು. ಈಗ ಬೇಡಿಕೆ ಹೆಚ್ಚಾಗಿದ್ದು, ಸರ್ಕಾರ 40 ಮಕ್ಕಳನ್ನು ಸೇರಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ, ಹೆಚ್ಚಾಗುತ್ತದೆ. ಪೋಷಕರ ಕೂಗಿಗೆ ಸರ್ಕಾರ ಸ್ಪಂದಿಸಿದಂತಾಗಿದೆ ಎಂದರು.