ಮಾಸ್ಕ್ ಮ್ಯಾನ್ ಬಂಧನವನ್ನ ಗೃಹ ಸಚಿವ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ. ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಅಧಿಕಾರಿಗಳು ತನಿಖೆಯನ್ನು ಮುಂದುವರಿಸುತ್ತಾರೆ ಹೆಚ್ಚಿನ ಮಾಹಿತಿ ಎಸ್ಐಟಿ ಅದರಿಂದ ಪಡೆಯುತ್ತೇನೆ. ತನಿಖೆ ಪೂರ್ಣಗೊಳ್ಳುವವರಿಗೆ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಇದರ ಹಿಂದೆ ಯಾವ ಜಾಲ ಇದೆ ಅನ್ನೋದನ್ನ ಪತ್ತೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.