ಹನೂರು:ತಾಲ್ಲೂಕಿನ ಮಲ್ಲಯ್ಯನಪುರದ ಬಳಿ ಇರುವ ಚೆಕ್ ಡ್ಯಾಂನಲ್ಲಿ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಸಂಜೆ 5ರಲ್ಲಿ ನಡೆದಿದೆ. ಕೌದಳ್ಳಿ ಗ್ರಾಮದ ಸಿದ್ದರಾಮಶೆಟ್ಟಿ (50) ಎಂಬವರೇ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಬಹಿರ್ದೆಸೆಗೆ ತೆರಳಿದ ವೇಳೆ ಚೆಕ್ ಡ್ಯಾಂ ಹತ್ತಿರಕ್ಕೆ ಹೋಗಿದ್ದು, ಅಲ್ಲಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮುಳುಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳೀಯರು ಮತ್ತು ಪೊಲೀಸರ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.