ಖ್ಯಾತ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸಲು ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸೌಧದಲ್ಲಿ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರಿಂದ ವಿಷ್ಣುವರ್ಧನ್ ಸ್ಮಾರಕ ಕುರಿತಂತೆ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಮೈಲಸಂದ್ರ ಗ್ರಾಮದ ಸರ್ವೆ ನಂ.26 ರಲ್ಲಿ 62 ಎಕರೆ20 ಗುಂಟೆ ಪ್ರದೇಶವನ್ನು "ತುರಹಳ್ಳಿ ರಾಜ್ಯ ಅರಣ್ಯ" ಎಂದು ಘೋಷಸಿ ಮೈಸೂರು ಸರ್ಕಾರ 1935ರಲ್ಲಿ ಅಧಿಸೂಚನೆ ಹೊರಡಿಸಿತ್ತು.