ಚಿತ್ರದುರ್ಗದ ಜಿಲ್ಲಾ ಪಂಚಾಯತ್ ನಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಸಹಯೋಗದಲ್ಲಿ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಯೋಜನೆ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಕುರಿತು ಹಿರಿಯೂರು ಮತ್ತು ಹೊಸದುರ್ಗ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.