ಯಾದಗಿರಿ ನಗರಕ್ಕೆ ನೀರು ಯಾವಾಗ?
ಜಿಲ್ಲಾಧಿಕಾರಿಗಳು ಬದಲಾದರೂ ಕಾಮಗಾರಿ ಪೂರ್ಣಗೊಳ್ಳಲಿಲ್ಲ!
ಯಾದಗಿರಿ: ಯಾದಗಿರಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಮಹತ್ವದ ನೀರಿನ ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಇರುವುದಕ್ಕೆ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಯಾದಗಿರಿ ನಗರದಲ್ಲಿ ನೀರಿನ ಸಮಸ್ಯೆ ಕುರಿತು ಹೋರಾಟ ನಡೆಸುವವರು ಯಾರೂ ಇಲ್ಲದಂತಹ ಪರಿಸ್ಥಿತಿಯಲ್ಲಿ, ಅಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ. ಸುಶೀಲಾ ಬಿ. ಅವರು ಭರವಸೆ ನೀಡಿ, ನೀರಿನ ಯೋಜನೆಯ ಕಾಮಗಾರಿಗೆ ಚಾಲನೆ ನೀಡಿದ್ದರು.
ಆದರೆ ಡಾ. ಸುಶೀಲಾ ಬಿ. ಅವರು ವರ್ಗಾವಣೆಯಾದ ಬಳಿಕ ಮತ್ತಿಬ್ಬರು ಜಿಲ್ಲಾಧಿಕಾರಿಗಳು ಅಧಿಕಾರ ವಹಿಸಿಕೊಂಡಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಕಳೆದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ನಗರದ ಜನರಿಗೆ ಶಾಶ್ವತ ಹಾಗೂ ಸಮರ್ಪಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಆರಂಭವಾದ ಕಾಮಗಾರಿ ವಿಳಂಬವಾಗುತ್ತಿರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಜನರಿಗೆ ನೀರಿನ ಸೌಲಭ್ಯ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಯಾದಗಿರಿ ನಗರದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಯಾವಾಗ? ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕರಲ್ಲಿ ಮೂಡಿದೆ.
Yadgir, Yadgir | Sep 11, 2026