ರೇಷನ್ ಕಾರ್ಡ್ ಇ-ಕೆವೈಸಿ ಹೆಸರಿನಲ್ಲಿ ಹಣ ವಸೂಲಿ ಮಾಡಿದರೆ ಲೈಸೆನ್ಸ್ ರದ್ದು; ನ್ಯಾಯಬೆಲೆ ಅಂಗಡಿಗಳಿಗೆ ಸಚಿವರ ಖಡಕ್ ಎಚ್ಚರಿಕೆ!
ಬೆಂಗಳೂರು: ರೇಷನ್ ಕಾರ್ಡ್ ಇ-ಕೆವೈಸಿ ಪ್ರಕ್ರಿಯೆಗಾಗಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದ್ದಾರೆ.
ಇ-ಕೆವೈಸಿ ಹೆಸರಿನಲ್ಲಿ ಹಣ ಪಡೆಯುವುದು ಕಂಡುಬಂದರೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ 10ರಿಂದ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಲಾಗಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
#YadgirNews #BreakingNews #EKYC #RationCard #ರೇಷನ್ ಕಾರ್ಡ್ #ಇಕೆವೈಸಿ #ನ್ಯಾಯಬೆಲೆಅಂಗಡಿ #ಸಚಿವರಿಜ್ವಾನ್ಅರ್ಷದ್ #KarnatakaNews #KannadaNews #RationCardEKYC #PublicDistributionSystem #FoodDepartment #ಕರ್ನಾಟಕಸುದ್ದಿ #ಸರ್ಕಾರದಎಚ್ಚರಿಕೆ #YadgirNewsKannada